ಬೇಕರಿಯಲ್ಲಿ ಅಗ್ನಿ ಅವಘಡ

0
392

ರಾಷ್ಟ್ರೀಯ ಪ್ರತಿನಿಧಿ ವರದಿ
ಪುಣೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಗೆ ಬೆಂಕಿ ತಗುಲಿದ್ದು, ಘಟನೆಯಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ.
 
 
 
ಕೋಂಡ್ವಾ ಪ್ರದೇಶದಲ್ಲಿರುವ ಬೇಕ್ ಮತ್ತು ಕೇಕ್ ಬೇಕರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಮಂದಿ ಸಜೀವವಾಗಿ ದಹನವಾದ ಘಟನೆ ಇಂದು ಮುಂಜಾನೆ ನಡೆದಿದೆ.
 
 
 
ಬೇಕರಿಯಲ್ಲಿ ಕೆಲಸ ಮಾಡುವ 6 ಮಂದಿ ಕಾರ್ಮಿಕರು ಒಳಗಡೆ ಮಲಗಿದ್ದರು. ಮುಂಜಾನೆ ವೇಳೆ ಈ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಹೊರಬರಲಾರದೇ ಉಸಿರುಗಟ್ಟಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ ಎಂಬುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
 
 
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here