ಬೇಡಿಕೆ ಈಡೇರದಿದ್ದರೆ ಸಂಜೆಯೇ ಪ್ರಯಾಣ

0
399

ಮಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗವಹಸಿಲು ಮಂಗಳೂರಿನಿಂದ ಅಂಗನವಾಡಿ ಕಾರ್ಯಕರ್ತೆಯರು ಸಿದ್ಧತೆ ನಡೆಸಿದ್ದು, ಇಂದು ಸಂಜೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಪ್ರಯಾಣಿಸುತ್ತೇವೆ.
 
 
ಬೆಂಗಳೂರಿಗೆ ತೆರಳಿ ಹೋರಾಟದಲ್ಲಿ ಪಾಲ್ಗೊಳ್ಳಲು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಸಿದ್ಧತೆ ನಡೆಸಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ ಜಯಲಕ್ಷ್ಮೀ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ರಾಯಚೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಿಂದ ತೆರಳಲು ಸಿದ್ಧತೆ ನಡೆಸಲಾಗಿದೆ.
 
 
 
ಗೌರವ ಧನ 7ರಿಂದ 10 ಸಾವಿರಕ್ಕೆ ಏರಿಕೆ, ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಹೋರಾಟ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here