ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ ಗೆ

0
175

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ರಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಪದಕದಾಸೆ ಇನ್ನೂ ಜಿವಂತವಿದ್ದು, ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತ ಪಿವಿ ಸಿಂಧು ಹಾಗೂ ಕಿಡಾಂಬಿ ಶ್ರೀಕಾಂತ್ ಅವರು ಕ್ವಾರ್ಟರ್ ಫೈನಲ್ ಗೇರಿದ್ದಾರೆ.
 
 
ಯೋ ಡಿ ಜನೈರೋದಲ್ಲಿ ನಡೆದ ಮಹಿಳೆಯ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ತೈಪೆ ದೇಶದ ಟಾಯ್ ಟ್ಜು ಯಿಂಗ್ ಅವರನ್ನು 21-13, 21-15 ಅಂಕಗಳ ಅಂತರದಿಂದ ಮಣಿಸಿದರು. ಆ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.
 
 
ಪುರುಷರ ವಿಭಾಗದಲ್ಲಿ ಭಾರತದ ಕಿಡಾಂಬಿ ಶ್ರೀಕಾಂತ್ ಅವರು, ಡ್ಯಾನಿಷ್ ಮೂಲದ ಜಾನ್ ಜೋರ್ಗನ್ ಅವರನ್ನು 21-19, 21-19 ನೇರ ಸೆಟ್ ಗಳ ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.

LEAVE A REPLY

Please enter your comment!
Please enter your name here