ಭಯೋತ್ಪಾದನಾ ತಡೆಗೆ ಒಪ್ಪಂದ

0
274

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಆಫ್ರಿಕಾ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆ ತಡೆಗಾಗಿ ದಕ್ಷಿಣ ಆಫ್ರಿಕಾ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. ಬಹುಪಕ್ಷೀಯ ವೇದಿಕೆಯಲ್ಲಿ ಭಯೋತ್ಪಾದನೆ ತಡೆ ವಿಚಾರದ ಜಂಟಿ ಪ್ರಸ್ತಾಪಕ್ಕೂ ಒಪ್ಪಿಗೆ ನೀಡಲಾಗಿದೆ.
 
 
ಅಲ್ಲದೆ ರಕ್ಷಣಾ ಕ್ಷೇತ್ರ, ಗಣಿ ಮತ್ತು ಖನಿಜ ಕ್ಷೇತ್ರಗಳಲ್ಲಿ ಆಹಾರಭದ್ರತೆ, ಉತ್ಪಾದನೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಗೆ ಎರಡು ರಾಷ್ಟ್ರಗಳ ಸಹಮತ ನೀಡಿದೆ. ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೊಬ್ ಜುಮಾ ಜತೆ ವಿಸ್ತೃತ ಚರ್ಚೆ ವೇಳೆ ಸಹಮತ ಪಡೆದಿದೆ.
 
 
ಆಫ್ರಿಕಾದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ಮೋದಿ ಅವರು ಮೊಜಾಂಬಿಕ್ ದೇಶದ ಪ್ರವಾಸವನ್ನು ಯಶಸ್ವಿಗೊಳಿಸಿ ಇಂದು ದಕ್ಷಿಣ ಆಫ್ರಿಕ ತಲುಪಿದ್ದಾರೆ. ದಕ್ಷಿಣ ಆಫ್ರಿಕ ಅಧ್ಯಕ್ಷ ಜೇಕಬ್‌ ಜಮಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಯೋತ್ಪಾದನೆ ವಿರುದ್ಧ ಸಕ್ರಿಯವಾಗಿ ಹೋರಾಡಲು, ಸಹಕರಿಸಲು ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಮಸ್ಯೆಗಳನ್ನು ನಿಭಾಯಿಸಲು ಉಭಯ ದೇಶಗಳು ನಿರ್ಧರಿಸಿವೆ ಎಂದರು.
 
 
ಕೃತಜ್ಞತೆ
ಭಾರತದ ಎನ್ ಎಸ್ ಜಿ ಸೇರ್ಪಡೆ ಯತ್ನ ಕುರಿತ ವಿಚಾರದಲ್ಲಿ ಭಾರತಕ್ಕೆ ಬೆಂಬಲ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಕೃತಜ್ಞತೆ ಸಲ್ಲಿಸಿದ್ದಾರೆ.
ಪರಮಾಣು ಪೂರೈಕೆದಾರರ ಸಮೂಹ ವಿಚಾರದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್ ಸಭೆಯಲ್ಲಿ ದಕ್ಷಿಣ ಆಫ್ರಿಕಾ ಬೆಂಬಲಿಸಿತ್ತು. ಸಿಯೋಲ್ ನಲ್ಲಿ ನಡೆದಿದ್ದ ಎನ್ ಎಸ್ ಜಿ ರಾಷ್ಟ್ರಗಳ ಸಭೆಯಲ್ಲಿ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಯತ್ನಕ್ಕೆ ದಕ್ಷಿಣಾ ಆಫ್ರಿಕಾ ಬೆಂಬಲ ನೀಡಿತ್ತು.
 
 
ಭಾರತೀಯ ಸಮುದಾಯವನ್ನುದ್ದೇಶಿಸಿ…
ದಕ್ಷಿಣಾ ಆಫ್ರಿಕಾ ನೆಲ್ಸನ್ ಮಂಡೇಲಾಗೆ ಮಾತೃಭೂಮಿಯಾದರೆ, ಮಹಾತ್ಮ ಗಾಂಧಿ ಪಾಲಿಗೆ ದಕ್ಷಿಣಾ ಆಫ್ರಿಕಾ ಕರ್ಮಭೂಮಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣನೆ ಮಾಡಿದ್ದಾರೆ.
ದಕ್ಷಿಣಾ ಆಫ್ರಿಕಾ ಪ್ರವಾಸದಲ್ಲಿರುವ ಮೋದಿ ಜೊಹಾನ್ಸ್ ಬರ್ಗ್ ನ ಡೋಮ್ ಸಭಾಂಗಣದಲ್ಲಿ 15 ಸಾವಿರ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಾ ಈ ಮೇಲಿನ ಮಾತುಗಳನ್ನು ಹೇಳಿದ್ದಾರೆ.

LEAVE A REPLY

Please enter your comment!
Please enter your name here