ಭಾರತಕ್ಕೆ ಪಾಕ್ ಎಚ್ಚರಿಕೆ

0
198

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಸಿಂಧು ನದಿ ನೀರು ಹಂಚಿಕೆಗೆ ವಿಚಾರದಲ್ಲಿ ಯಾವುದೇ ಬದಲಾವಣೆಗಳಾದರೂ ಅದನ್ನು ಒಪ್ಪುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಭಾರವನ್ನು ಎಚ್ಚರಿಸಿದೆ ಎನ್ನಲಾಗಿದೆ.
 
ಸಿಂಧೂ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಪಾಕಿಸ್ತಾನದೊಂದಿಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಭಾರತ ಸಿದ್ಧವಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಸಿಂಧೂ ನದಿ ನೀರು ಹಂಚಿಕೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಒಪ್ಪುವುದಿಲ್ಲ ಎಂದು ಹೇಳಿದೆ.
 
1960 ರಲ್ಲಿ ಸಹಿ ಹಾಕಲಾಗಿದ್ದ ಒಪ್ಪಂದದ ಪ್ರಕಾರ ಭಾರತಕ್ಕೆ ಬಿಯಾಸ್, ರಾವಿ ಮತ್ತು ಸಟ್ಲೆಜ್ ನದಿ ನೀರಿನ ಮೇಲೆ ನಿಯಂತ್ರಣ ಇದ್ದು, ಪಾಕಿಸ್ತಾನಕ್ಕೆ ಚೆನಾಬ್ ಸಿಂಧೂ, ಝೀಲಂ ನದಿಗಳ ನೀರಿನ ಮೇಲೆ ನಿಯಂತ್ರಣ ನೀಡಲಾಗಿದೆ.

LEAVE A REPLY

Please enter your comment!
Please enter your name here