ಭಾರತೀಯ ಮೀನುಗಾರರ ಬಿಡುಗಡೆ

0
418

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಶ್ರೀಲಂಕಾದ ಜಲಗಡಿಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಬಂಧಿಸಲಾಗಿದ್ದ ಭಾರತೀಯ ಮೀನುಗಾರರನ್ನು ಶ್ರೀಲಂಕಾದ ಎರಡು ಪ್ರತ್ಯೇಕ ನ್ಯಾಯಾಲಯಗಳು ಬಿಡುಗಡೆ ಮಾಡಿವೆ.
 
 
 
ಒಟ್ಟು 34 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ . ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಮೇ.13 ರಂದು ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶ್ರೀಲಂಕಾ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಏಪ್ರಿಲ್ ತಿಂಗಳಲ್ಲಿ ಬಂಧಿಸಲಾಗಿದ್ದ 34 ಭಾರತೀಯ ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ.
 
 
 
ಉಭಯ ರಾಷ್ಟ್ರಗಳ ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮೋದಿ ಹಾಗೂ ಸಿರಿಸೇನಾ ಮಾತುಕತೆ ನಡೆಸಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here