ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

0
476

ಬೆಂಗಳೂರು ಪ್ರತಿನಿಧಿ ವರದಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರ್ನಾಟಕದ ಹಲವು ಕಡೆ ಉತ್ತಮ ಸ್ಪಂದನೆ ದೊರೆತಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ವ್ಯಾಪಾರ ವಹಿವಾಟುಗಳು ಸ್ವಲ್ಪಮಟ್ಟಿಗೆ ಸ್ಥಗಿತವಾಗಿದ್ದವು. ವಾಹನ ಸಂಚಾರದಲ್ಲೂ ವ್ಯತ್ಯಯವಾಗಿರುವ ಹಿನ್ನಲೆಯಲ್ಲಿ ಸ್ವಲ್ಪಮಟ್ಟಿಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬಿಎಂಟಿಸಿ, ಕೆಎಸ್ಸಾರ್ಟಿಸಿ ಬಸ್  ಸಂಚಾರ ಸ್ಥಗಿತಗೊಂಡಿವೆ.
 
 
ಜಾಥಾ
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇಡೀ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆನೇಕಲ್ ಮತ್ತಿತರ ಕಡೆ ಪ್ರತಿಭಟನಾಕಾರರು ಟಯರ್ ಗಳಿಗೆ ಬೆಂಕಿ ಹಚ್ಚಿ  ಪ್ರತಿಭಟನೆ ಮಾಡಿದ್ದಾರೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಿಂದ ಬಸ್ ಸಂಚಾರ ಪ್ರಾರಂಭವಾಗಿದೆ. ಖಾಸಗೀ ವಾಹನ, ಮ್ಯಾಕ್ಸಿಕ್ಯಾಬ್ ಗಳಲ್ಲಿ ಜನ ಓಡಾಡುತ್ತಿದ್ದರು.
ಬಿಗಿ ಬಂದೋಬಸ್ತ್
ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೀಣ್ಯಾದಿಂದ ಟೌನ್ ಹಾಲ್ ತನಕ ರ್ಯಾಲಿ ನಡೆಯಲಿದೆ.
 
 

LEAVE A REPLY

Please enter your comment!
Please enter your name here