ಭಾರೀ ಅಗ್ನಿ ಅವಘಡ

0
453

ರಾಷ್ಟ್ರೀಯ ಪ್ರತಿನಿಧಿ ವರದಿ
ಪ್ಲಾಸ್ಟಿಕ್ ತ್ಯಾಜ್ಯ ಮಾರುಕಟ್ಟೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ದೆಹಲಿಯ ಮುಂಡ್ಕ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ.
 
 
ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಾರುಕಟ್ಟೆಯ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಘಟನಾ ಸ್ಥಳಕ್ಕೆ 33 ಅಗ್ನಿ ಶಾಮಕದಳದ ವಾಹನಗಳೊಂದಿಗೆ ದೌಡಾಯಸಿದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
 
 
ಘಟನೆಗೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ. ಯಾವುದೇ ರೀತಿಯ ಸಾವು, ನೋವುಗಳ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here