ಭಾರೀ ಭೂಕುಸಿತ

0
402

 
ರಾಷ್ಟ್ರೀಯ ಪ್ರತಿನಿಧಿ ವರದಿ
ವ್ಯಾಪಕ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅರುಣಾಚಲ ‍ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಶುಕ್ರವಾರ ದೊಡ್ಡ ಪ್ರಮಾಣ ಭೂಕುಸಿತ ಉಂಟಾಗಿದೆ.
 
 
ತವಾಂಗ್ ಪಟ್ಟಣದಿಂದ ನಾಲ್ಕು ಕಿಲೋ ಮೀಟರ್ ದೂರದ ಕಾರ್ಮಿಕರ ಬಿಡಾರದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ 14ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಜನರು ನಾಪತ್ತೆಯಾಗಿದ್ದಾರೆ.
 
 
 
ಘಟನಾ ಸ್ಥಳದಿಂದ 14 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಚೀನಾದ ಗಡಿಗೆ ಹೊಂದಿಕೊಂಡಿರುವ ಥಾಮ್ಲಾ ಬಿಡಾರದಲ್ಲಿ 17 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದ ವೇಳೆ ನಸುಕಿನ 3.30ಕ್ಕೆ ಈ ದುರಂತ ಸಂಭವಿಸಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾಡ್‌ ಗಂಬೊ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here