ಭಾರೀ ಹಿಮಪಾತ

0
320

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಅಫ್ಘಾನಿಸ್ತಾನದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಹಿಮಪಾತ ಸುರಿಯುತ್ತಿದ್ದು, ಹಿಮಪಾತಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಪತ್ತುಗಳು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
 
 
 
ಕೇಂದ್ರ ಮತ್ತು ಈಶಾನ್ಯ ಪ್ರಾಂತ್ಯಗಳಲ್ಲಿ ಹಿಮಪಾತದಿಂದಾಗಿ ಹಲವು ಮನೆಗಳು ಮತ್ತು ರಸ್ತೆಗಳು ನಾಶವಾಗಿವೆ ಎಂದು ನೈಸರ್ಗಿಕ ವಿಪತ್ತುಗಳು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
 
 
ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ನೈಸರ್ಗಿಕ ವಿಪತ್ತುಗಳು ಸಚಿವಾಲಯದ ವಕ್ತಾರ ಮೊಹಮ್ಮದ್ ಒಮರ್ ಮೊಹಮ್ಮದಿ ಅವರು ಹೇಳಿದ್ದಾರೆ.
 
ಭಾರಿ ಹಿಮಪಾತದಿಂದಾಗಿ ಒಟ್ಟು 168 ಮನೆಗಳು ಕುಸಿದು ಬಿದ್ದಿವೆ ಮತ್ತು 340 ಜಾನುವಾರಗಳು ಸಾವನ್ನಪ್ಪಿವೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here