ಭೀಕರ ಕಾಲ್ತುಳಿತ

0
151

ರಾಷ್ಟ್ರೀಯ ಪ್ರತಿನಿಧಿ ವರದಿ
ಭೀಕರ ಕಾಲ್ತುಳಿತಕ್ಕೆ 12 ಮಂದಿ ಸಾವನ್ನಪ್ಪಿದ್ದ ಘಟನೆ ಉತ್ತರಪ್ರದೇಶದ ವಾರಣಾಸಿಯ ರಾಜ್ ಘಾಟ್ ಸೇತುವೆ ಮೇಲೆ ನಡೆದಿದೆ.
ಧಾರ್ಮಿಕ ಕಾರ್ಯಕ್ರಮದ ಮೇಲೆ ಭಕ್ತರ ನೂಕುನುಗ್ಗಲು ಕಾಣಿಸಿಕೊಂಡಿದೆ. ಜೈ ಗುರುದೇವ್ ಸಮಾಗಮದ ವೇಳೆ ನಡೆದ ಕಾಲ್ತುಳಿತಕ್ಕೆ 19 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಮೃತರಲ್ಲಿ 15 ಮಹಿಳಯರು ಮತ್ತು 4 ಪುರುಷರು ಇದ್ದಾರೆ.
 
 
ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮ್ತತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
 
 
ಕಾರ್ಯಕ್ರಮಕ್ಕೆ ಮೂರು ಸಾವಿರ ಜನಕ್ಕೆ ಅನುಮತಿ ಪಡೆಯಲಾಗಿತ್ತು. ಆದರೆ ಅಲ್ಲಿ ಹೆಚ್ಚು ಜನ ಜಮಾಯಿಸಿದ ಕಾರಣ ಈ ದುರ್ಘಟನೆ ಸಂಭವಿಸಿದೆ.
 
ಪರಿಹಾರ:
ಉತ್ತರಪ್ರದೇಶ ಸರ್ಕಾರ ಪರಿಹಾರ ಧನವನ್ನು ಘೋಷಿಸಿದೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ.ಗಳನ್ನು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here