ಭೀಕರ ದುರಂತ: ಮೂವರು ದುರ್ಮರಣ

0
404

 
ಕೊಡಗು ಪ್ರತಿನಿಧಿ ವರದಿ
ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಬಳಿ ಸಂಭವಿಸಿದೆ.
 
 
 
ಕಣ್ಣೂರು-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ. ಭೀಕರ ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
 
 
 
ಪೊಲೀಸರು ಕಾರಿನಿಂದ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here