ಭೀಕರ ದುರ್ಘಟನೆ

0
265

 
ಕಲಬುರಗಿ ಪ್ರತಿನಿಧಿ ವರದಿ
ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ 8 ಜನ ಸಾವನ್ನಪ್ಪಿದ್ದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಡೋಗೀನಾಲಾ ಗ್ರಾಮದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಕ್ರೂಸರ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
 
 
ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕ್ರೂಸರ್ ನಲ್ಲಿದ್ದವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಕಣಗರಾ ಗ್ರಾಮದವರಾಗಿದ್ದಾರೆ. ಇವರು ಬೆಳಗ್ಗೆ ಕಣಗರಾ ಗ್ರಾಮದಿಂದ ಗಾಣಪುರದಲ್ಲಿರುವ ದತ್ತಾತ್ರೇಯ ದೇವಾಲಯಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
 
 

LEAVE A REPLY

Please enter your comment!
Please enter your name here