ಭೀಕರ ರಸ್ತೆ ಅಪಘಾತ

0
126

ರಾಷ್ಟ್ರೀಯ ಪ್ರತಿನಿಧಿ ವರದಿ
ಮಿನಿ ಲಾರಿ ಮತ್ತು ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 7 ಜನ ದುರ್ಮರಣ ಹೊಂದಿದ್ದ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ಮಣಪ್ಪಾರೈ ಬಳಿ ಸಂಭವಿಸಿದೆ.
 
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳೀಗೆ ದಿಂಡಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ ತಮಿಳುನಾಡಿನ ಮಧುರೈನಿಂದ ತಿರುಚ್ಚಿಗೆ ಹೊರಟಿತ್ತು.
 
 
 
ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರೆಲ್ಲರೂ ಮಿನಿ ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು. ಮಣಪ್ಪಾರೈ ಬಳಿಯ ಕೋವಿಲ್ ಪಟ್ಟಿ ಗ್ರಾಮದ ದೇವಸ್ಥಾನದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ತಿರುಚ್ಚಿ ಜಿಲ್ಲಾಧಿಕಾರಿ ಪಳನಿಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here