ಮಂಡ್ಯಕ್ಕೆ ಬಿಎಸ್ ವೈ

0
289

ಮಂಡ್ಯ ಪ್ರತಿನಿಧಿ ವರದಿ
ಕಾವೇರಿ ನೀರು ಹೋರಾಟದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.
 
 
ಮಂಡ್ಯದ ಡಿಸಿ ಕಚೇರಿ ಬಳಿ ಮಾದೇಗೌಡ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಬಿಎಸ್ ವೈ ಪಾಲ್ಗೊಳ್ಳಲಿದ್ದಾರೆ. ಬಳಿಕ ಯಡಿಯೂರಪ್ಪ ಹಾಸನಕ್ಕೆ ತೆರಳಲಿದ್ದಾರೆ.
 
 
ಇದಕ್ಕೂ ಮೊದಲು ಬಿಜೆಪಿ ಕಾರ್ಯಕರ್ತರು ಮದ್ದೂರು ಗಡಿಭಾಗದ ನಿಡಘಟ್ಟ ಬಳಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ರ್ಯಾಲಿ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here