ಮತ್ತಷ್ಟು ಕ್ರಮಕ್ಕೆ ಮುಂದಾದ ಭಾರತ

0
339

ರಾಷ್ಟ್ರೀಯ ಪ್ರತಿನಿಧಿ ವರದಿ
ಉರಿ ಸೇನಾನೆಲೆಯ ಮೇಲೆ ಉಗ್ರರಿಂದ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಮತ್ತಷ್ಟು ಕ್ರಮಕ್ಕೆ ಭಾರತ ಮುಂದಾಗಿದೆ.
ಪಾಕಿಸ್ತಾನಕ್ಕೆ ನೀಡಿದ್ದ ವಿಶೇಷ ಮಾನ್ಯತೆ ಕುರಿತು ಪರಾಮರ್ಶೆ ನಡೆದಿದೆ. ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ವಿಶೇಷ ಮಾನ್ಯತೆ ಪರಾಮರ್ಶೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಸಭೆ ನಡೆಸಿದ್ದಾರೆ.
ಸಿಂಧೂ ನದಿ ನೀರಿನ ಹಂಚಿಕೆ ಬಗ್ಗೆ ಪ್ರಧಾನಿ ಪರಾಮರ್ಶೆ ಮಾಡಿದ್ದಾರೆ.
 
 
ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ!
ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ 3,323 ಕಿಮೀ ಗಡಿ ಪ್ರದೇಶದ ಭದ್ರತೆಗೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಬೇಕೆಂಬ ಸಮಿತಿಯೊಂದರ ಸಲಹೆಗೆ ಭಾರತ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.
ಜಮ್ಮು-ಕಾಶ್ಮೀರ, ರಾಜಸ್ತಾನ, ಗುಜರಾತ್, ಪಂಜಾಬ್ ರಾಜ್ಯಗಳು ಪಾಕಿಸ್ತಾನದೊಂದಿಗೆ ಗಡಿ ಪ್ರದೇಶಗಳನ್ನು ಹೊಂದಿದ್ದು, ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಈ ಪ್ರದೇಶಗಳಲ್ಲಿ ಸ್ಮಾರ್ಟ್ ಬೇಲಿ ನಿರ್ಮಾಣವಾಗಲಿದೆ. ಗಡಿ ಪ್ರದೇಶಗಳಲ್ಲಿ ಗ್ರಿಡ್ ಆಧಾರಿತ ವ್ಯವಸ್ಥೆ ಜಾರಿಗೆ ತರುವಂತೆಯೂ ಈ ಸಮಿತಿ ಶಿಫಾರಸ್ಸು ಮಾಡಿದ್ದು, ಶಿಫಾರಸ್ಸು ಜಾರಿಯಾದಲ್ಲಿ ಬಿಎಸ್ಎಫ್ ಯೋಧರಿಗೆ ನಾಲ್ಕು ರಾಜ್ಯಗಳ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಹೈ ಟೆಕ್ ಉಪಕರಣಗಳು ದೊರೆಯಲಿವೆ.

LEAVE A REPLY

Please enter your comment!
Please enter your name here