ಮತ್ತೆ ಉಗ್ರರ ಕೆಂಗಣ್ಣು

0
117

 
ವರದಿ:ಲೇಖಾ
ಪಠಾಣ್‌ಕೋಟ್‌ ವಾಯುನೆಲೆಗೆ ಸಮೀಪದ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಮತ್ತೊಮ್ಮೆ ಪಠಾಣ್‌ಕೋಟ್‌ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
 
 
 
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
 
 
 
ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಬಳಿ ಸಮಿತಿ ಭದ್ರತಾ ಕ್ರಮಗಳನ್ನು ಪರಿಶೀಲಿಸುತ್ತಿರುವ ಸಮಿತಿ, ಅದಕ್ಕೂ ಮುನ್ನ ಪಠಾಣ್​ಕೋಟ್​ಗೆ ತೆರಳಿ ಪರಿಶೀಲನೆ ನಡೆಸಿತ್ತು. ‘ಕೆಲ ಉಗ್ರರು ಹಳ್ಳಿಯಲ್ಲಿ ಅಡಗಿರುವುದಾಗಿ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ಅದರ ಆಧಾರದಲ್ಲಿ ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ’ ಎಂದು ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಪಿ. ಭಟ್ಟಾಚಾರ್ಯ ತಿಳಿಸಿದ್ದಾರೆ.
 
 
 
ಈ ಹಿನ್ನೆಲೆಯಲ್ಲಿ ಪಠಾಣ್​ಕೋಟ್​ನ ಆಯಕಟ್ಟಿನ ಪ್ರದೇಶಗಳಲ್ಲಿ ಸಿಆರ್​ಪಿಎಫ್, ಬಿಎಸ್​ಎಫ್ ಮತ್ತು ಸೇನಾ ತುಕಡಿಗಳನ್ನು ನಿಯೋಜಿಸಲಾಗಿದೆ. ಜತೆಗೆ, ಉಗ್ರರ ಪತ್ತೆಗೆ ಬಲೆಬೀಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

LEAVE A REPLY

Please enter your comment!
Please enter your name here