ಮತ್ತೆ ಬಂಧನಕ್ಕೊಳಗಾದ ಬಾದ್ ಶಾ

0
286

 
ರಾಷ್ಟ್ರೀಯ ಪ್ರತಿನಿಧಿ ವರದಿ
ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅವರು ಅಮೆರಿಕದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ವಿಚಾರಣೆಯ ನೆಪದಲ್ಲಿ ಲಾಸ್ ಏಂಜಲಿಸ್ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಶಾರುಖ್ ಖಾನ್ ಅವರನ್ನು ಅಮೆರಿಕದ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
 
 
ಶಾರುಖ್ ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವುದು ಇದು ಮೊದಲೇನಲ್ಲ. 2012ರಲ್ಲಿ ನ್ಯೂಯಾರ್ಕ್ ನಲ್ಲಿ ಕೂಡ ಅವರನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು. ಸುಮಾರು ಎರಡು ಗಂಟೆಗಳ ಕಾಲ ಅವರ ವಿಚಾರಣೆ ನಡೆಸಿದ್ದರು.
 
 
ಈ ಬಗ್ಗೆ ಟ್ವೀಟ್ ಮಾಡಿರುವ ಶಾರುಖ್ ಖಾನ್ ಭದ್ರತೆ ಹಾಗೂ ಸುರಕ್ಷತೆ ನಿಯಮಗಳನ್ನು ನಾನು ಗೌರವಿಸುತ್ತೇನೆ. ಆದರೆ ಪದೇ ಪದೇ ಅಮೆರಿಕ ಈ ರೀತಿ ನನ್ನನ್ನು ವಿನಾಕಾರಣ ತಪಾಸಣೆ ನಡೆಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here