ಮತ್ತೆ ಸೋರಿಕೆಯಾದ್ರೆ ಗುಡ್ ಬೈ

0
546

ಬೆಂಗಳೂರು ಪ್ರತಿನಿಧಿ ವರದಿ
ಮತ್ತೆ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಶುಕ್ರವಾರ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈಗಾಗಲೇ ಎರಡು ಬಾರಿ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಎರಡು ಬಾರಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಮೂರನೇ ಬಾರಿ ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ್ರೆ ಮಂತ್ರಿ ಸ್ಥಾನ ತ್ಯಜಿಸುತ್ತೇನೆ ಎಂದು ತಿಳಿಸಿದ್ದಾರೆ.
ಈ ಬಾರಿ ಎಲ್ಲಾ ರೀತಿಯ ಭದ್ರತೆ ಒದಗಿಲಸಲಾಗುತ್ತಿದೆ. ನಾನೇ ಖುದ್ದು ಜವಾಬ್ದಾರಿ ತೆಗೆದುಕೊಂಡಿದ್ದೇನೆ ಎಂದಿದ್ದಾರೆ.
 
 
ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪಿಯು ಬೋರ್ಡ್ ನಿಂದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅನ್ಯಾಯವಾಗಿದೆ. ಅದರೂ ನಾವು ಮರು ಪರೀಕ್ಷೆ ನಡೆಸಲೇಬೇಕಾಗಿದೆ ಅನಿರ್ವಾತೆ ಇದೆ. ಹೀಗಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.
 
ಇದನ್ನೆ ಅಸ್ತ್ರ ಮಾಡಿಕೊಂಡ ಪ್ರತಿಪಕ್ಷಗಳ ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿದ್ದವು. ಒಂದು ವೇಳೆ ಮತ್ತೆ ಸೋರಿಕೆಯಾದರೆ ರಾಜಿನಾಮೆ ನೀಡುವುದಾಗಿ ಹೇಳಿದರು.

LEAVE A REPLY

Please enter your comment!
Please enter your name here