ಪ್ರಮುಖ ಸುದ್ದಿರಾಜ್ಯವಾರ್ತೆ

ಮರುಪರೀಕ್ಷೆ ರದ್ದು

ಬೆಂಗಳೂರು ಪ್ರತಿನಿಧಿ ವರದಿ
ಮತ್ತೆ ಲೀಕ್ ಔಟ್ ಕೆಮಿಸ್ಟ್ರಿ
ದ್ವಿತೀಯ ಪಿಯುಸಿ  ರಾಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಔಟ್ ಆದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮರುಪರೀಕ್ಷೆ ರದ್ದಾಗಿದೆ. ರಾಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮತ್ತೆ ರದ್ದಾಗಿದ್ದು, ಪೋಸ್ಟ್ ಪೋನ್ ಆಗಿದೆ. ಬೆಂಗಳೂರು ಮತ್ತು ತುಮಕೂರಿನಲ್ಲಿ ಮತ್ತೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶಗೊಂಡಿದ್ದಾರೆ.
 
ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆ ಹೊರ ತೆಗೀಬೇಡಿ ಎಂದು ಜಿಲ್ಲಾ ಖಜಾನೆಗೆ ಪಿಯು ಬೋರ್ಡ್ ನಿರ್ದೇಶಕರು ಸೂಚನೆ ನೀಡಿದ್ದಾರೆ. ಪದೇ ಪದೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿದೆ. ಇದು ಪಿಯು ಬೋರ್ಡ್ ನ ನಿರ್ಲಕ್ಷ್ಯದ ಪರಮಾವಧಿಯಾಗಿದೆ.
ಕೈಯಲ್ಲಿ ಬರೆದ ಪ್ರಶ್ನೆಪತ್ರಿಕೆ ಪ್ರತಿಗಳು ಲಭ್ಯವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 3.30ರ ಸುಮಾರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿಗೆ ಮಾಹಿತಿ ಲಭ್ಯವಾಗಿದೆ.
ಸಚಿವರ ನೇತೃತ್ವದಲ್ಲಿ ಸಭೆ:
ವಿಧಾನಸೌಧದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ದಿಢಿರ್ ಸಭೆ ಕರೆದಿದ್ದಾರೆ. ಹಿರಿಯ ಅಧಿಕಾರಿಗಳ ಜತೆ ಸಚಿವರು ಸಭೆ ಕರೆದಿದ್ದಾರೆ. ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೇರಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
 
ಸಚಿವರ ವಿರುದ್ಧ ಕಾಂಗ್ರೆಸ್ ಗುಡುಗು
ಶಿಕ್ಷಣ ಸಚಿವ ಕಿಮ್ಮನೆ ವಿರುದ್ಧ ಕಾಂಗ್ರೆಸ್ ಶಾಸಕರು ಗರಂ ಆಗಿದ್ದಾರೆ. ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಜಾಕ್ಕೆ ಶಾಸಕರು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಶಾಸಕರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಶಾಸಕ ಎಸ್ ಟಿ ಸೋಮಶೇಖರ್ ಪತ್ರ ಬರೆದಿದ್ದಾರೆ. ಇಲಾಖೆ, ಅಧಿಕಾರಿಗಳ ಮೇಲೆ ಸಚಿವರುಗೆ ಹಿಡಿತವಿಲ್ಲ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಿಮ್ಮನೆ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ ಸಚಿವ ಕಿಮ್ಮನೆ ವಜಾಗೊಳಿಸುವಂತೆ ಕಾಂಗ್ರೆಸ್ ಶಾಸಕರು ಪತ್ರ ಬರೆದಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here