ಮಹದಾಯಿ ಗೋಡೆ ಮಟ್ಯಾಷ್

0
261

 
ಬೆಳಗಾವಿ ಪ್ರತಿನಿಧಿ ವರದಿ
ಕಳಸಾ-ಬಂಡೂರಿ ಹೋರಾಟ ತೀವ್ರಗೊಂಡಿದೆ. ಮಹದಾಯಿ, ಕಳಸಾ-ಬಂಡೂರಿ ತಡೆಗೋಡೆಯನ್ನು ತೆರವು ಮಾಡಲಾಗಿದೆ. ಬೆಳಗಾವಿಯಲ್ಲಿ ಕಳಸಾ-ಬಂಡೂರಿ ಹೋರಾಟಗಾರರು ತಡೆಗೋಡೆಯನ್ನು ತೆರವುಗೊಳಿಸಿದ್ದಾರೆ.
 
 
ಮಿಷನ್ ಹರಹರ ಮಹದಾಯಿ ಹೆಸರಿನಲ್ಲಿ ಹೋರಾಟ ನಡೆಸಲಾಗಿದ್ದು, ಗಿರೀಶ್ ಮಟ್ಟಣ್ಣನವರ್ ನೇತೃತ್ವದಲ್ಲಿ ಹೋರಾಟಗಾರರು ರಾತ್ರಿ 1 ಗಂಟೆಯಿಂದ ಮುಂಜಾನೆ 5ರವರೆಗೆ ತಡೆಗೋಡೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.
 
ಏನಿದು ಹೋರಾಟ..?
ಮಹಾದಾಯಿ ನದಿಯನ್ನು ಗೋವಾದ ಜೀವನದಿ ಎಂದು ಕರೆಯುತ್ತಾರೆ. ಸುಮಾರು 77 ಕಿ.ಮೀ. ಇರುವ ಈ ನದಿಯು ಕರ್ನಾಟಕದಲ್ಲಿ ಸುಮಾರು 29 ಕಿ.ಮೀ.ಹರಿಯುತ್ತದೆ. ರಾಜ್ಯದ ಬೆಳಗಾವಿಯ ಮೂಲಕ ಈ ನದಿ ಹರಿದು ಸಮುದ್ರ ಸೇರಿಕೊಳ್ಳುತ್ತದೆ. ಕರ್ನಾಟಕದ ಮೂಲಕ ಹರಿದು ಹೋಗುವ ನೀರನ್ನು ಬಳಸಿಕೊಂಡು, ನೀರನ್ನು ಮಲಪ್ರಭಾ ಡ್ಯಾಂನಲ್ಲಿ ಸಂಗ್ರಹಿಸಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆ.

LEAVE A REPLY

Please enter your comment!
Please enter your name here