ಮಹದಾಯಿ ವಿಚಾರ: ಆ.7ರಂದು ಸರ್ವಪಕ್ಷಗಳ ಸಭೆ

0
186

 
ವರದಿ: ಲೇಖಾ
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ಬಯಸಿರುವ ರಾಜ್ಯ ಸರ್ಕಾರವು ಈ ಬಗ್ಗೆ ಮತ್ತೆ ನ್ಯಾಯಾಧಿಕರಣದ ಮೊರೆ ಹೋಗಲು ನಿರ್ಧರಿಸಿದೆ.
 
 
 
ಆಗಸ್ಟ್ 7 ರಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲಾ ಸಂಸದರು ಹಾಗೂ ಸರ್ವಪಕ್ಷಗಳ ಸದನ ನಾಯಕರ ಸಭೆಯನ್ನು ಆಯೋಜಿಸಿ ಮುಂದಿನ ಕ್ರಮ ಕುರಿತು ಚರ್ಚಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
 
 
 
ಗೃಹ ಸಚಿವ ಡಾ ಜಿ. ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಗಳಾದ ಎಲ್. ಕೆ. ಅತೀಕ್ ಹಾಗೂ ತುಷಾರ್ ಗಿರಿನಾಥ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here