ಮಹಿಳಾ ಸಮಾವೇಶ

0
156

ಶ್ರೀ ಸಾಯಿಸಾಗರ್ ಫೌಂಡೇಶನ್ ನ ಅಂಗಸಂಸ್ಥೆ ಜಾಗೃತ ಮಹಿಳಾ ವೇದಿಕೆಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜಾಗೃತ ಮಹಿಳಾ ಸಮಾವೇಶವು ಮಾರ್ಚ್ 9 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟಣೆಯಾಗಲಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ದಿವಾಕರ್ ಪಾಂಡೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.


ಉಪಮಹಾಪೌರರಾದ ವೇದಾವತಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮೈಸೂರು ಇದರ ಉಪನಿರ್ದೇಶಕಿ ಟಿ.ಸಿ. ಪೂರ್ಣಿಮಾ, ಎಂ.ಆರ್.ಪಿ.ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಲಕ್ಷ್ಮೀ ಕುಮಾರನ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಬಿ. ಎಂ. ಫಾರೂಕ್, ಐವನ್ ಡಿ ಸೋಜಾ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ,ಮಾಜಿ ಶಾಸಕ ಜೆ. ಆರ್. ಲೋಬೋ, ಜೆಡಿಎಸ್ ಮಹಿಳಾ ಘಟಕ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷೆ ಸುಮತಿ ಎಸ್. ಹೆಗ್ಡೆ , , ಕಾಂಗ್ರೆಸ್ ಮಹಿಳಾ ಘಟಕ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಜಾಗೃತ ಮಹಿಳಾ ವೇದಿಕೆಯ ಸ್ಥಾಪಕಾಧ್ಯಕ್ಷೆ ಪವಿತ್ರಾ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Advertisement


ಇದೇ ಸಂಧರ್ಭದಲ್ಲಿ ವೀರವನಿತೆ ಪ್ರಶಸ್ತಿ ಪ್ರಧಾನ ಸಮಾರಂಭ ಕೂಡ ನಡೆಯಲಿದ್ದು, ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್, ಸಮಾಜ ಸೇವಕಿ ಭವ್ಯಾರಾಣಿ, ಅಂತರ್ರಾಷ್ಟ್ರೀಯ ಕ್ರೀಡಾಪಟು ಸುಪ್ರೀತಾ ಪೂಜಾರಿ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here