ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಅಸ್ವಸ್ಥರಾಗಿದ್ದು ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರು ಶುಕ್ರವಾರ ಸಂಜೆಯೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದೊಂದು ವಾರದಿಂದ ಹೆಚ್ ಡಿಕೆ ರಾಜ್ಯ ಪ್ರವಾಸ ಮಾಡಿದ್ದರು. ಮೈಸೂರು, ಚಿತ್ರದುರ್ಗದಲ್ಲಿ ಪ್ರವಾಸ ಬೆಳೆಸಿದ್ದರು. ಈ ವೇಳೆ ಪಕ್ಷದ ಕಾರ್ಯಕರ್ತರು ಹಲವೆಡೆ ಪಟಾಕಿ ಸಿಡಿಸಿದ್ದರು. ಪಟಾಕಿ ಹೊಗೆ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.