ಮುಂಗಾರು ಅಧಿವೇಶನಕ್ಕೆ ಸಿದ್ಧರಾಗುವಂತೆ ಪ್ರಧಾನಿ ಸೂಚನೆ

0
273

 
ವರದಿ:ಲೇಖಾ
ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಮುಂಗಾರು ಅಧಿವೇಶನಕ್ಕೆ ಸಿದ್ಧತೆ ನಡೆಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
 
 
 
ನೂತನ ಸಚಿವರುಗಳನ್ನು ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪ್ರಧಾನಿ ಮೋದಿ, ಸಚಿವರೊಂದಿಗೆ ಮಾತುಕತೆ ನಡೆಸಿದರು. ನಾನು ಪ್ರಧಾನಿಯಾದ ಮೊದಲ ನಾಲ್ಕು ತಿಂಗಳು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಕಲಿತೆ. ರಾಜ್ಯ ಸಚಿವ ಸ್ಥಾನ ಈ ಸರ್ಕಾರದಲ್ಲಿ ಅತಿ ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದಲೇ ನೀವೆಲ್ಲರೂ ವೇಗಗತಿಯಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವರಿಗೆ ತಿಳಿಸಿದ್ದಾರೆ.
 
 
 
ಸಚಿವರಿಗೆ ಕೆಲವೊಂದು ಸೂಚನೆಗಳನ್ನು ನೀಡಿರುವ ಪ್ರಧಾನಿ ಮೋದಿ,ಸಂಭ್ರಮಾಚರಣೆಗಳನ್ನು ಬಿಟ್ಟು ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಹೇಳಿದ್ದಾರೆ. ಮುಂಗಾರು ಅಧಿವೇಶನಕ್ಕೆ ಸಿದ್ಧತೆ ನಡೆಸಿಕೊಳ್ಳಿ ಎಂದಿರುವ ಅವರು, ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here