ಮುಂಬೈಯಲ್ಲಿ ಮಹಾಮಳೆ

0
220

 
ರಾಷ್ಟ್ರೀಯ ಪ್ರತಿನಿಧಿ ವರದಿ
ಮುಂಬೈನ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ವಾಣಿಜ್ಯ ನಗರಿ ತತ್ತರಿಸಿ ಹೋಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
 
 
 
ಮುಂಬೈನಲ್ಲಿ 68.9 ಮಿಲಿ ಮೀಟರ್ ಮಳೆ ದಾಖಲಾಗಿದೆ. ಬಾಂದ್ರಾ, ಅಂಧೇರಿ, ಭಿವಂಡಿ ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಮುಂಬೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here