ಮೂಡುಬಿದಿರೆಯಲ್ಲಿ ಹೆಚ್ಚುತ್ತಿದೆ ಕೊರೊನಾ – ಭಯ ಬೇಡ ಜಾಗೃತರಾಗಿ

0
2514


ಮೂಡುಬಿದಿರೆ: ತಾಲೂಕಿನಾದ್ಯಂತ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಒಂದೆಡೆ ಈ ಬಗ್ಗೆ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಗಳು ನಡೆಯುತ್ತಿವೆ. ಜಾಗೃತಿ ಕಾರ್ಯವೂ ಆಗುತ್ತಿದೆ. ಇದರ ಜೊತೆ ಜೊತೆಗೆ ಲಸಿಕಾ ಕಾರ್ಯವೂ ನಡೆಯುತ್ತಿದೆ. ಹೀಗಿದ್ದರೂ ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿದೆ. ಜನತೆ ಇನ್ನೂ ಸಮರ್ಪಕವಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದೇ ಇದಕ್ಕೆ ಮುಖ್ಯ ಕಾರಣ.
ತಾಲ್ಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗತೊಡಗಿದೆ .ಗುರುವಾರ ಹದಿನೆಂಟು ಪ್ರಕರಣಗಳು ದಾಖಲಾಗಿವೆ .ಈ ಪೈಕಿ 14ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೊಳಗಾಗಿದ್ದಾರೆ .

ಮೂಡುಬಿದಿರೆ ವ್ಯಾಪ್ತಿಯಲ್ಲಿ ಬುಧವಾರ ಕೊರೊನಾ ಪಾಸಿಟಿವ್ ಆಗಿರುವ ಒಟ್ಟು 36ಪ್ರಕರಣ ದಾಖಲಾಗಿದ್ದು ಈ ಪೈಕಿ 26ಮಂದಿ ಹೋಂ ಕ್ವಾರಂಟೈನ್ ಪಡೆದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. 10ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here