ಮೂವರು ಉಗ್ರರು ಮಟಾಷ್

0
288

 
ರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತೀಯ ಯೋಧರ ಕಾರ್ಯಾಚರಣೆ ವೇಳೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮು ಜಿಲ್ಲೆಯ ಅವಂತಿಪುರದಲ್ಲಿ ನಡೆದಿದೆ.
 
 
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭಾರತೀಯ ಯೋಧರು ಸ್ಥಳೀಯ ಪೊಲೀಸರೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
 
 
ಕಾರ್ಯಾಚರಣೆ ವೇಳೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡು ಹಾರಿಸಿದ್ದಾರೆ. ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಅವರನ್ನು ಅಶ್ಫಾಕ್ ಅಹ್ಮದ್ ದಾರ್, ಇಶ್ಫಾಕ್ ಅಹ್ಮದ್ ಬಾಬಾ, ಹಸೇಬ್ ಅಹ್ಮದ್ ಎಂದು ಗುರುತಿಸಲಾಗಿದೆ.
 
 
ಘಟನಾ ಸ್ಥಳದಲ್ಲಿ ಉಗ್ರರು ಬಳಸುತ್ತಿದ್ದ 3-ಎಕೆ 47  ಬಂದೂಕುಗಳನ್ನು ಯೋಧರು ವಶಪಡಿಸಿಕೊಂಡಿದ್ದಾರೆ. ಮತ್ತಷ್ಟು ಭಯೋತ್ಪಾದಕರು ಆಡಗಿರುವ ಶಂಕೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಯಿಂದ ಕಾರ್ಯಾಚರಣೆ ಮುಂದುವರಿಸಲಾಗಿದೆ.

LEAVE A REPLY

Please enter your comment!
Please enter your name here