ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

0
245

ಬೆಂಗಳೂರು ಪ್ರತಿನಿಧಿ ವರದಿ
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಗಾಯಾಳುಗಳಿಗೆ ಪರಿಹಾರದ ಜತೆ ಚಿಕಿತ್ಸೆ ವೆಚ್ಚ ಭರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
 
 
ಇನ್ನುಮುಂದೆ ಎಲ್ಲಾ ಬಸ್ ಗಳಲ್ಲಿ ಅಗ್ನಿಶಾಮಕ ಉಪಕರಣ ಬಳಸಲಾಗುತ್ತದೆ. ಅಗ್ನಿಶಾಮಕ ಉಪಕರಣ ಇದ್ದರೆ ಈ ಘಟನೆ ಆಗುತ್ತಿರಲಿಲ್ಲ. ರಾತ್ರಿ 11 ಗಂಟೆಯ ವೇಳೆಗೆ ಬಸ್ ನಲ್ಲಿ ಬೆಂಕಿ ಕಾಣಿಸಿದೆ. ಬಸ್ ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇರಲಿಲ್ಲ. ಇಂಜಿನ್ ನಲ್ಲಿ ಬೆಂಕಿ ಹತ್ತಿಲ್ಲ, ಶಾರ್ಟ್ ಸರ್ಕ್ಯೂಟ್ ಆಗಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
 
ಪ್ರಯಾಣಿಕರು ಹೇಳುವ ಪ್ರಕಾರ ಬಸ್ ನಲ್ಲಿ ಮೂಟೆ ಇತ್ತು. ಆ ಮೂಟೆಯಲ್ಲಿ ಪೂಜೆ ಸಾಮಾಗ್ರಿಗಳು ಇತ್ತೆಂಬ ಮಾಹಿತಿಯಿದೆ ಎಂದು ಸಚಿವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here