ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

0
373

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ನದಿಯಿಂದ ತಮಿಳುನಾಡು ರಾಜ್ಯಕ್ಕೆ ಹರಿಯುವ ಹೆಚ್ಚುವರಿ ನೀರು ಬಳಸಿಕೊಳ್ಳಲು ಮೇಕೆದಾಟು ಬಳಿ ರೂ.5.912 ಕೋಟಿ ವೆಚ್ಚದಲ್ಲಿ 66.50 ಟಿಎಂಸಿ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಿಸುವ ಯೋಜನೆಗೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
 
 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರವ ಅವರು ಈ ವಿಷಯವನ್ನು ತಿಳಿಸಿದ್ದಾರೆ.
 
 
ಕಾವೇರಿ ನ್ಯಾಯಾಧೀಕರಣದ ತೀರ್ಪಿನ ಅನ್ವಯ ಕಾವೇರಿ ನದಿಯಿಂದ ತಮಿಳುನಾಡಿಗೆ 192 ಟಿಎಂಸಿ ನೀರು ಹರಿಸಿದ ಬಳಿಕವೂ ಹೆಚ್ಚುವರಿಯಾಗಿ 35 ರಿಂದ 265 ಟಿಎಂಸಿ ನೀರು ಹರಿದು ಸಮುದ್ರಕ್ಕೆ ಸೇರುತ್ತಿತ್ತು. ಹೀಗಾಗಿ ಈ ಹೆಚ್ಚುವರಿ ನೀರಿನ ಸದ್ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here