ಮೇಲ್ಮನವಿ ಅರ್ಜಿ ವಜಾ

0
462

ರಾಷ್ಟ್ರೀಯ ಪ್ರತಿನಿಧಿ ವರದಿ
ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾವಾಗಿದೆ. ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪಿನ ವಿರುದ್ಧ ತೆಲಂಗಾಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
 
 
 
ಕೃಷ್ಣಾ ನದಿ ನೀರು ಮರು ಹಂಚಿಕೆ ಮಾಡಲು ಸಾಧ್ಯವಿಲ್ಲ. 2013ರಲ್ಲಿ ನೀಡಿದ್ದ ನೀರು ಹಂಚಿಕೆಯೇ ಅಂತಿಮ ಎಂದು ಸುಪ್ರೀಂ ಹೇಳಿದೆ. ಕೃಷ್ಣಾ ನದಿ ನ್ಯಾಯಾಧಿಕರಣ ಟ್ರಿಬ್ಯುನಲ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಸುಪ್ರೀಂಕೋರ್ಟ್ ನ್ಯಾಯಾಧಿಕರಣದ ತೀರ್ಪನ್ನು ಎತ್ತಿಹಿಡಿದಿದೆ.
ತೆಲಂಗಾಣ ಅರ್ಜಿಗೆ ಕರ್ನಾಟಕ, ಮಹಾರಾಷ್ಟ್ರ ಆಕ್ಷೇಪ ವ್ಯಕ್ತಪಡಿಸಿತ್ತು.
 
 
 
ಆಂಧ್ರ ಪುನಾರಚನೆ ಕಾಯ್ದೆ 89ರಡಿ ಹಂಚಿಕೆಯಾಗಬೇಕು.ಆಂಧ್ರಪ್ರದೇಶಕ್ಕೆ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಬೇಕು. ಆಂಧ್ರಪ್ರದೇಶ, ತೆಲಂಗಾಣ ನಡುವೆ ಹಂಚಿಕೆಯಾಗಬೇಕು ಎಂದು ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪು ನೀಡಿತ್ತು.

LEAVE A REPLY

Please enter your comment!
Please enter your name here