ಮ್ಯಾನ್ ಹೋಲ್ ದುರಂತ: 3 ಸಾವು

0
455

ಬೆಂಗಳೂರು ಪ್ರತಿನಿಧಿ ವರದಿ
ಮ್ಯಾನ್ ಹೋಲ್ ಸ್ವಚ್ಛಗೊಳಿಸಿದ್ದ ಸಂದರ್ಭದಲ್ಲಿ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಸಿ.ವಿ. ರಾಮನ್ ನಗರ ವ್ಯಾಪ್ತಿಯ ಕಗ್ಗದಾಸಪುರದಲ್ಲಿ ಸೋಮವಾರ ನಡೆದಿದೆ.
 
ಈ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ತಪ್ಪೆಸಗಿದವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಹಣವನ್ನು ಜಾರ್ಜ್ ಘೋಷಿಸಿದ್ದಾರೆ.
 
 
 
ಮೂವರೂ ಕಾರ್ಮಿಕರು ರಾತ್ರಿಯ ವೇಳೆ ಕೆಲಸಕ್ಕೆ ಇಳಿದಿದ್ದರು. ಒಳಗೆ ಹೋದ ಕಾರ್ಮಿಕರು ದುರ್ಮರಣ ಅಪ್ಪಿರುವುದಾಗಿ ಹೇಳಲಾಗಿದೆ. ಬಿಡಬ್ಲು ಎಸ್​ಎಸ್​ಬಿ ನಿರ್ಲಕ್ಷ್ಯಕ್ಕೆ ಕಾರ್ಮಿಕರು ಬಲಿಯಾಗಿದ್ದಾರೆ.
 
 
 
ಟ್ರಾಕ್ಟರ್​ನಲ್ಲಿ ಬಂದಿದ್ದ ಇಬ್ಬರು ಕಾರ್ಮಿಕರು ಒಳಗೆ ದುರಸ್ತಿ ನಡೆಸಲು ಇಳಿದಿದ್ದರು. ನೀರಿನ ಸೋರಿಕೆ ಮತ್ತು ಒಳಗೆ ಗೋಡೆ ನಿರ್ಮಿಸಲೆಂದು ಕಾರ್ಮಿಕರು ಒಳಗೆ ಇಳಿದಿದ್ದರು. ಈ ವೇಳೆ ಇಬ್ಬರೂ ಆಮ್ಲಜನಕದ ಕೊರತೆಯಿಂದ ಕಿರುಚಾಡಿದ್ದಾರೆ. ತಕ್ಷಣ ಟ್ರಾಕ್ಟರ್​ ಚಾಲಕ ಹಗ್ಗದ ಸಹಾಯದಿಂದ ಒಳಗೆ ಇಳಿದಿದ್ದಾನೆ. ಕೊನೆಗೆ ಮೂವರೂ ಮ್ಯಾನ್​ ಹೋಲ್​ನ ಒಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here