ಜೂನ್‌ ೨೫ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

0
1191


ಬೆಂಗಳೂರು: ಕೊನೆಗೂ ಎಸ್.ಎಸ್.ಎಲ್.ಸಿ. ಪರೀಕ್ಷೆ ದಿನಾಂಕವನ್ನು ನಿಗಧಿ ಮಾಡಲಾಗಿದೆ. ಜೂನ್‌ ೨೫ರಿಂದ ಜುಲೈ ೪ರ ತನಕ ಎಸ್.ಎಸ್.ಎಲ್.ಸಿ. ಪಬ್ಲಿಕ್‌ ಪರೀಕ್ಷೆ ನಡೆಸಲು ಮುಹೂರ್ತ ಫಿಕ್ಸ್‌ ಆಗಿದೆ. ಜೂನ್‌ ೧೮ರಂದು ಪದವಿಪೂರ್ವ ವಿಭಾಗದ ಇಂಗ್ಲಿಷ್‌ ಪರೀಕ್ಷೆ ನಡೆಯಲಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ೮೪೮,೧೯೬ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯಲಿದ್ದಾರೆ. ಗುಡ್‌ ಲಕ್‌ ವಿದ್ಯಾರ್ಥಿಗಳೇ.

ಕೊರೊನಾ ಲಾಕ್ ಡೌನ್ ಕಾರಣದಿಂದ ಪರೀಕ್ಷೆ ಮುಂದೂಡಲಾಗಿತ್ತು .ಎಸ್.ಎಸ್. ಎಲ್. ಸಿ.ಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆಗಳು ನಡೆಯಲಿವೆ. ಸಂಪೂರ್ಣ ಪರೀಕ್ಷೆ10 ದಿನದಲ್ಲಿ ಮುಗಿಯಲಿದೆ ಎಂದು ವಿವರಿಸಿದ್ದಾರೆ.

ಕೊಠಡಿ ಹೆಚ್ಚು: ಹೆಚ್ಚುವರಿ ಕೊಠಡಿ ಬಳಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುತ್ತದೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಕೆಯಾಗಲಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಿ ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಮಾಸ್ಕ್ ಕಡ್ಡಾಯ ಮಾಡುತ್ತಿದ್ದೇವೆ. ಒಬ್ಬೊಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುವ ಬಗ್ಗೆಯೂ ಚಿಂತಿಸಲಾಗಿದೆ. ಸುರಕ್ಷತೆಯ ದೃಷ್ಠಿಯಿಂದ ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು.

LEAVE A REPLY

Please enter your comment!
Please enter your name here