ಯೋಗ ದಿನಾಚರಣೆ: ಸ್ಪಂದನೆಗೆ ಪ್ರಧಾನಿ ಮೋದಿ ಸಂತಸ

0
418

ವರದಿ: ಲೇಖಾ
2014ರ ಸೆಪ್ಟೆಂಬರ್​ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಪ್ರಸ್ತಾಪಿಸಿದಾಗ ವಿದೇಶಗಳಿಂದ ಇಷ್ಟು ಪ್ರಮಾಣದ ಉತ್ಸಾಹ ಕಂಡುಬರಬಹುದೆಂಬ ನಿರೀಕ್ಷೆಯಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
 
 
 
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ನವದೆಹಲಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಗೆ ಸಿಗುತ್ತಿರುವ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದರು.
 
 
 
ಕಳೆದ ವರ್ಷ ವಿಶ್ವಾದ್ಯಂತ ಯೋಗ ದಿನಾಚರಣೆಯನ್ನು ಒಗ್ಗಟ್ಟಾಗಿ ಆಚರಿಸಲಾಗಿತ್ತು. ಈ ವರ್ಷ ಮತ್ತೆ ಅಂತಹದ್ದೇ ವಾತಾವರಣ ನಿರ್ವಣವಾಗುವ ನಿರೀಕ್ಷೆಯಿದೆ. ಈ ಮೂಲಕ ಪ್ರಾಚೀನ ಪರಿಕಲ್ಪನೆಯಾದ ವಸುಧೈವ ಕುಟುಂಬಕಂ ಎಂಬುದು ಮತ್ತೊಮ್ಮೆ ಸಾಬೀತಾಗಲಿದೆ ಎಂದು ಹೇಳಿದ್ದಾರೆ.
 
 
ಪ್ರಧಾನಿ ನರೇಂದ್ರ ಮೋದಿಯವರು ಚಂಡೀಗಢದಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದರೆ, 57 ಕೇಂದ್ರ ಸಚಿವರು ದೇಶದ ವಿವಿಧೆಡೆ ನಡೆಯಲಿರುವ ಯೋಗ ಕಾರ್ಯಕ್ರಮಗಳ ಮುಂದಾಳತ್ವ ವಹಿಸಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here