ಯೋಗ ಭಾರತೀಯ ಸಂಸ್ಕೃತಿಯ ಪ್ರಾಚೀನ ಕೊಡುಗೆ: ಸಿಎಂ

0
217

 
ಬೆಂಗಳೂರು ಪ್ರತಿನಿಧಿ ವರದಿ
2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದರು.
 
 
 
ಈ ವೇಳೆ ಮಾತನಾಡಿದ ಅವರು, ಪ್ರತಿನಿತ್ಯ ಯೋಗ ಮಾಡುವುದರಿಂದ ನವಚೈತನ್ಯಬರುತ್ತದೆ ಹಾಗೂ ಆರೋಗ್ಯ ಸಮಸ್ಯೆಗಳು ದೂರವಾಗಲಿವೆ ಎಂದರು. ಯೋಗವನ್ನು ಎಲ್ಲರೂ ಮಾಡಬೇಕು. ಮಧುಮೇಹ ನಿಯಂತ್ರಣಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು.
 
 
 
ಯೋಗ ಭಾರತೀಯ ಸಂಸ್ಕೃತಿಯ ಪ್ರಾಚೀನ ಕೊಡುಗೆ. ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತು ನಮ್ಮಲ್ಲಿದೆ. ಆದರೆ ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನೂ ಇಲ್ಲ. ಸರಿಯಾದ ರೀತಿಯಲ್ಲಿ ಯೋಗವನ್ನು ರೂಢಿಸಿಕೊಂಡಲ್ಲಿ ಆರೋಗ್ಯ ವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ಇತ್ತೀಚಿನ ದಿನಗಳಿಂದ ನಾನೂ ಕೂಡ ಯೋಗಾಸನಗಳನ್ನು ಮಾಡುತ್ತಿದ್ದೇನೆ ಎಂದರು.
 
 
 
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಆಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಯು.ಟಿ.ಖಾದರ್, ಸಚಿವರಾದ ರೋಷನ್ ಬೇಗ್, ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಯೋಗಾಸನಗಳ ಮಾಡಿದರು.

LEAVE A REPLY

Please enter your comment!
Please enter your name here