ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ

0
188

ರಾಷ್ಟ್ರೀಯ ಪ್ರತಿನಿಧಿ ವರದಿ
ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.
 
 
ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ನಿನ್ನೆಯಷ್ಟೇ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಅಲ್ಲದೆ, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
 
 
ಯೋಧರಿಗೆ ಸರಿಯಾದ ಆಹಾರ ನೀಡುತ್ತಿಲ್ಲ ಎಂದು ಅನ್ನೋ ಆರೋಪಕ್ಕೆ ಬಿಎಸ್ ಎಫ್ ಅಧಿಕಾರಿಗಳು ಪ್ರತಿಕ್ರಿಯೆಸಿದ್ದಾರೆ. ಚಳಿಗಾಲದ ಹಿನ್ನೆಲೆಯಲ್ಲಿ ಟಿನ್ ಆಹಾರ ನೀಡಲಾಗುತ್ತಿತ್ತು. ಇಲ್ಲದಿದ್ದರೆ ಕ್ಯಾಂಪ್ ಗಳಿಗೆ ತಾಜಾ ತರಕಾರಿ ಪೂರೈಸಲಾಗುತ್ತಿತ್ತು. ಯೋಧನ ಆರೋಪದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಲಾಗುತ್ತದೆ. ಜನವರಿ ಒಂದರಿಂದ ಚಳಿಗಾಲದ ಆಹಾರ ಸಂಗ್ರಹ ಸ್ಥಗಿತವಾಗಿದೆ. ತಾಜಾ ತರಕಾರಿ ಪೂರೈಕೆ ಸಾಧ್ಯವಿಲ್ಲ. ರಸ್ತೆಗಳು ಬಂದ್ ಹಿನ್ನೆಲೆಯಲ್ಲಿ ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here