ರಕ್ಷಕ-ಶಿಕ್ಷಕ ಸಂಘದ ಉದ್ಘಾಟನೆ ಮತ್ತು ಮಹಾಸಭೆ

0
253

 
ಪುತ್ತೂರು ಪ್ರತಿನಿಧಿ ವರದಿ
ಇಲ್ಲಿಯ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಉದ್ಘಾಟನೆ ಮತ್ತು ಮಹಾ ಸಭೆಯು ದಿನಾಂಕ 16-07-2016 ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ.
 
puttur_pta
 
ಪೂರ್ವಾಹ್ನ ನಡೆಯಲಿರುವ ಚಿಂತನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆಯ ಡಾ| ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ನರೇಂದ್ರ ರೈ ದೇರ್ಲ ‘ವಿದ್ಯಾರ್ಥಿಗಳ ಪೋಷಕರಿಗಾಗಿ ಪೋಷಕತ್ವ’ ಎಂಬ ವಿಷಯದ ಕುರಿತು ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸಲಿದ್ದಾರೆ.
 
 
ಕಾಲೇಜಿನ ಸಂಚಾಲಕರಾದ ರೆ. ಫಾ. ಆಲ್ಫ್ರೆಡ್ ಜೆ. ಪಿಂಟೊ ಮತ್ತು ಕ್ಯಾಂಪಸ್ ನಿರ್ದೇಶಕರಾಗಿರುವ ರೆ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ 2016 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 95ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು, ಯುವ ವಿಜ್ಞಾನಿಗಳು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
 
 
ವಿದ್ಯಾರ್ಥಿಗಳ ಪೋಷಕರು ಎಲ್ಲಾ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳಬೇಕಾಗಿ ಕಾಲೇಜಿನ ಪ್ರಾಚಾರ್ಯರಾದ ವಂ. ವಿಜಯ್ ಲೋಬೊ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಡಾ| ಸೂರ್ಯನಾರಾಯಣ ಕೆ, ಕಾರ್ಯದರ್ಶಿ ಪ್ರಶಾಂತ್ ಭಟ್ ಪಿ ಮತ್ತು ಖಜಾಂಜಿ ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here