ರಕ್ಷಕ ಶಿಕ್ಷಕ ಸಂಘದ ಸಭೆ

0
3041

ಮೂಡುಬಿದಿರೆ: ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ರಹಿಮಾನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಮೇಶ್ ಭಟ್ ಅಧ್ಯಕ್ಷ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುಚರಿತ ಶೆಟ್ಟಿ, ಸತ್ಯಪ್ರಸಾದ್ ಹೆಗ್ಡೆ ಮತ್ತು ಶಶಿಪ್ರಭಾ ಉಪಸ್ಥಿತರಿದ್ದರು.

ಹಿಂದಿ ವಿಭಾಗದ ಉಪನ್ಯಾಸಕಿ ಪ್ರಮೀಳಾ ಚೊಕ್ಕಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಜಾತಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here