ರಸ್ತೆ ಅಪಘಾತ

0
251

 
ರಾಮಮಗರ ಪ್ರತಿನಿಧಿ ವರದಿ
ಲಾರಿಗೆ ಹಿಂಬರಿಯಿಂದ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.
 
 
ಟಿಟಿ ವಾಹನದಲ್ಲಿದ್ದ ನಾಗೇಶ್(45), ಉಮೇಶ‍್(43) ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೂದೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

LEAVE A REPLY

Please enter your comment!
Please enter your name here