ರಸ್ತೆ ಅಪಘಾತ

0
240

ಬಂಟ್ವಾಳ ಪ್ರತಿನಿಧಿ ವರದಿ
ಖಾಸಗಿ ಬಸ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
 
 
ಖಾಸಗಿ ಬಸ್ ಉಪ್ಪಿನಂಗಡಿಯಿಂದ ಮಂಗಳೂರಿಗೆ ಬರುತ್ತಿತ್ತು. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಪರಿಣಾಮ ರಸ್ತೆ ಬದಿಯಲ್ಲಿದ್ದ ಗೂಡಂಗಡಿಗೆ ಹಾನಿಯಾಗಿದ್ದು, ಬಸ್ ಕೂಡ ಜಖಂಗೊಂಡಿದೆ.

LEAVE A REPLY

Please enter your comment!
Please enter your name here