ರಾಜೀನಾಮೆ ನೀಡಲು ಸಿದ್ಧರಾಗಿರಿ

0
328

 
ಬೆಂಗಳೂರು ಪ್ರತಿನಿಧಿ ವರದಿ
ಮಂಗಳೂರು ಡಿವೈಎಸ್ ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟದಂತೆ ಸಚಿವ ಕೆ ಜೆ ಜಾರ್ಜ್ ವಿರುದ್ಧ ಎಫ್ ಐ ಆರ್  ದಾಖಲಿಸಲು ಮಡಿಕೇರಿ ಕೋರ್ಟ್ ಆದೇಶಿಸಿದೆ.
 
 
 
ಇಂದು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ವಿಚಾರಣೆ ನಡೆಸಿದ ಮಡಿಕೇರಿ ಕೋರ್ಟ್ ಗಣಪತಿ ಆರೋಪಿಸಿರುವ ಮೂವರ ವ್ಯಕ್ತಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲು ಮಡಿಕೇರಿ ಟೌನ್ ಪೊಲೀಸರಿಗೆ ಆದೇಶಿಸಿದೆ.  ಸಚಿವ ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ, ಎ ಎಂ ಪ್ರಸಾದ್ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ ನೀಡಿದೆ.
 
 
ತಮ್ಮ ತಂದೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈ ಮೂವರು ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಗಣಪತಿ ಅವರ ಪುತ್ರ ನೇಹಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮಡಿಕೇರಿ ಹೆಚ್ಚುವರಿ ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.
 
 
ತುರ್ತು ಸಭೆ
ಮಡಿಕೇರಿಯಲ್ಲಿ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆ ಸಚಿವ ಜಾರ್ಜ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಕೋರ್ಟ್ ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ತುರ್ತು ಸಭೆ ನಡೆಯಲಿದೆ.
ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಹಿರಿಯ ಸಚಿವರ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಸಚಿವ ಜಾರ್ಜ್ ಅವರ ರಾಜೀನಾಮೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
 
 
ಜಾರ್ಜ್ ಪ್ರತಿಕ್ರಿಯೆ
ನ್ಯಾಯಾಂಗದ ಆದೇಶವನ್ನು ಒಪ್ಪಿಕೊಳ್ಳುತ್ತೇನೆ. ರಾಜೀನಾಮೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲರಾಜೀನಾಮೆ ವಿಚಾರ ಸಿಎಂ ಸಿದ್ದರಾಮಯ್ಯಗೆ ಬಿಟ್ಟ ವಿಷಯ ಎಂದು ಬೆಂಗಳೂರಿನಲ್ಲಿ ಸಚಿವ ಕೆ ಜೆ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.
 
 
 
ಕೋರ್ಟ್ ಆದೇಶ ಹೊರಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಜಾರ್ಜ್ ಗೆ ಕರೆ ಮಾಡಿ ರಾಜೀನಾಮೆ ನೀಡಲು ಸಿದ್ದರಾಗಿ ಎಂದು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here