ರಾಜ್ಯದಲ್ಲಿ ಡೈರಿ ಜಗಳ

0
419

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ರಾಜಕೀಯದಲ್ಲಿ ಡೈರಿ ಕಿತ್ತಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್​ನಲ್ಲೀಗ ಏನೇನೋ ಚರ್ಚೆಗಳು ನಡೆಯುತ್ತಿವೆ. ಡೈರಿ ಬಿಡುಗಡೆಯಾಗಿ 2 ದಿನವಾದರೂ ಮೌನವಾಗಿದ್ದಾರೆ.
 
 
 
ಮಧ್ಯಾಹ್ನದವರೆಗೆ ಅಧಿಕೃತ ನಿವಾಸದಲ್ಲೇ ಉಳಿದಿದ್ದ ಸಿಎಂ ಯಾರ ಭೇಟಿಗೆ ಅವಕಾಶ ಕೊಡಲಿಲ್ಲ. ಬೆಳಗ್ಗೆ ಸಿಎಂ ಭೇಟಿಗಾಗಿ ಬಂದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್ ಹಾಗೆಯೇ ವಾಪಸಾಗಬೇಕಾಯಿತು. ಆದರೆ ಒಳಗೊಳಗೆ ಬಿಜೆಪಿ ಏಟಿಗೆ ಪ್ರತಿಯೇಟು ನೀಡಲು ತಂತ್ರಗಾರಿಕೆ ಮಾಡುತ್ತಿದ್ದಾರಾ ಎನ್ನುವ ಸುದ್ದಿ ಹರಿದಾಡುತ್ತಿದೆ.
 
 
 
ನಿನ್ನೆ ಮಧ್ಯಾಹ್ನದ ಬಳಿಕ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹಸಚಿವ ಡಾ. ಜಿ.ಪರಮೇಶ್ವರ್​, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್​, ಕೆಲವು ಆಪ್ತ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದಾದ ಬಳಿಕ ಗೃಹಕಚೇರಿ ಕೃಷ್ಣಾಗೆ ತೆರಳಿದ ಸಿಎಂ ಎರಡು ಸಭೆಗಳಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here