ರಾಜ್ಯದ ಹಲವೆಡೆ ತಣ್ಣೀರ ಸಿಂಚನ

0
255

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದ ಹಲವೆಡೆ ನಿನ್ನೆಯಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರು ನಗರದ ಹೊರವಲಯದಲ್ಲಿ, ಕೊಡುಗು ಮತ್ತು ಬೆಳಗಾವಿ ಜಿಲ್ಲೆಯಲ್ಲೂ ನಿನ್ನೆ ಅಲ್ಲಲ್ಲಿ ತುಂತುರು ಮಳೆಯಾಗಿದೆ.
 
 
 
ಚಾಮರಾಜನಗರದ ಕೆಲ ಭಾಗಗಳು, ಮೈಸೂರು, ಹಾಸನ, ಬೆಂಗಳೂರು ಗ್ರಾಮಾಂತರ, ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದೆ. ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬ ರಾಜ್ಯ ಹವಾಮಾನ ಇಲಾಖೆಯ ವರದಿಯಿಂದ ಐಟಿ ನಗರಿಯ ಜನರು ಕೊಂಚ ನಿಟ್ಟುಸಿರಿಟ್ಟಿದ್ದಾರೆ.
 
 
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ರಿಂದ 31 ಕ್ಕೆ ಇಳಿದಿದ್ದು ತೇವಾಂಶ ಹೆಚ್ಚುವುದಕ್ಕೆ ಕಾರಣವಾಗಿದೆ. ಈಗಾಗಲೇ ನೆರೆ ರಾಜ್ಯಗಳಾದ ಕೇರಳ ಮತ್ತು ತಮಿಳು ನಾಡಿನ ಕೆಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ರಾಜ್ಯದಲ್ಲೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here