ರಾಜ್ಯಸಭೆಯಲ್ಲಿ ರೆಡ್ಡಿ ಪುತ್ರಿ ವಿವಾಹ ಪ್ರತಿಧ್ವನಿ

0
164

ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ರಾಜ್ಯಸಭೆಯಲ್ಲಿ ರೆಡ್ಡಿ ಪುತ್ರಿ ಅದ್ಧೂರಿ ವಿವಾಹದ ಬಗ್ಗೆ ಪ್ರತಿಧ್ವನಿಸಿದೆ. ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಣಿ ವಿವಾಹದ ಬಗ್ಗೆ ಕಾಂಗ್ರೆಸ್ ಪ್ರಸ್ತಾಪಿಸಿದೆ.
 
 
ರಾಜ್ಯಸಭೆಯಲ್ಲಿ ಆನಂದ್ ಶರ್ಮಾ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅದ್ಧೂರಿ ಮದುವೆ ಮಾಡಿರುವ ಜನಾರ್ದನ ರೆಡ್ಡಿ ಬಂಧಿಸಿ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿದೆ.
 
 
ಕಪ್ಪು ಹಣದ ಕುರಿತು ಮಾತನಾಡುವ ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಪುತ್ರಿಯ ವಿವಾಹದಲ್ಲಿ ಭಾಗಿಯಾಗಿದ್ದಾರೆ. 500 ಕೋಟಿ ರೂ. ವೆಚ್ಚದ ಅದ್ಧೂರಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ರೆಡ್ಡಿಯೇನು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದಾರಾ? 500ಕೋಟಿ ವೆಚ್ಚದಲ್ಲಿ ಅದ್ಧೂರಿ ಮದುವೆ ಹಿನ್ನೆಲೆಯಲ್ಲಿ ಕೂಡಲೇ ಜನಾರ್ದನ ರೆಡ್ಡಿಯನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯ ಮಾಡಿದೆ.
 
 
ಪ್ರಧಾನಿ ಮೋದಿ ಪ್ರಶ್ನೆ ಕೇಳಲಾಗದಂಥ ವಾತಾವರಣ ಸೃಷ್ಟಿಸಿದ್ದಾರೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನ ಆನಂದ್ ಶರ್ಮಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here