ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

0
253

ಬೆಂಗಳೂರು ಪ್ರತಿನಿಧಿ ವರದಿ
ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಕುರಿತು ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಏಕೆ ಸಿಬಿಐ ತನಿಖೆಗೆ ವಹಿಸಲಿಲ್ಲ ಎಂಬುದಕ್ಕೆ ಕಾರಣ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
 
 
 
ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಕೋರಿ, ಗಣಪತಿ ಅವರ ತಂದೆ ಕುಶಾಲಪ್ಪ ಅವರು, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾ. ಆದರ್ಶ ಕುಮಾರ್ ಗೋಯೆಲ್ ಹಾಗೂ ಯು.ಯು ಲಲಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ ಆರು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
 
 
ಮಂಗಳೂರು ಐ.ಜಿ ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಕಳೆದ ಜುಲೈ 7 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ತಮ್ಮ ಸಾವಿಗೆ ಕಾರಣರಾದವರ ಹೆಸರನ್ನು ಹೇಳಿದ್ದು, ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದ ತನಿಖೆ ನಡೆಸಿ ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.

LEAVE A REPLY

Please enter your comment!
Please enter your name here