ರಾಷ್ಟ್ರೀಯ ವಿಚಾರ ಸಂಕಿರಣ

0
497

ಮಂಗಳೂರು ಪ್ರತಿನಿಧಿ ವರದಿ
ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಇಂದು “Pay India – 2017: Emerging Tax Reforms and its implications”ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
 
 
 
ಭಾರತೀಯ ಅರ್ಥವ್ಯವಸ್ಥೆಯಲ್ಲಿ ನೂತನವಾಗಿ ಜಾರಿಗೊಳಿಸಲಾದ ಸರಕು ಮತ್ತು ಸೇವಾ ತೆರಿಗೆ (Goods and Service Tax -GST) ಮತ್ತು ಅಪನಗದೀಕರಣದಿಂದ ಭಾರತೀಯ ಅರ್ಥವ್ಯವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ಬೆಳಕು ಚೆಲ್ಲುವುದು, ಆರ್ಥಿಕ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ತಜ್ಞರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳಲ್ಲಿ ಭಾರತೀಯ ತೆರಿಗೆ ನೀತಿ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಹೊಸ ತೆರಿಗೆ ನೀತಿಯಿಂದ ಆಗುವ ಲಾಭಗಳು ಮತ್ತು ನೂತನ ತೆರಿಗೆ ನೀತಿಯ ಜಾರಿಗೊಳಿಸುವ ಸವಾಲುಗಳು ಮತ್ತು ತಂತ್ರಗಳ ಬಗ್ಗೆ ಚರ್ಚಿಸುವುದು ಈ ವಿಚಾರ ಸಂಕಿರಣದ ಉದ್ದೇಶ.
 
 
ಈ ವಿಚಾರ ಸಂಕಿರಣದಲ್ಲಿ ಭಾರತ ಸರಕಾರದ ವಿವಿಧ ತೆರಿಗೆ ಇಲಾಖೆಗಳ ಅಧಿಕಾರಿಗಳು, ಲೆಕ್ಕ ಪರಿಶೋಧಕರು, , ಅಂ ಸದಸ್ಯರು ಮತ್ತು ಬ್ಯಾಂಕ್ ಉದ್ಯಮಿಗಳು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ನಡೆಸಲಾಗುವ ಚರ್ಚೆಗಳ ಬಗ್ಗೆ ಪುರಕ ಮಾಹಿತಿಯ ಆಮಂತ್ರಣ ಪತ್ರವನ್ನು ಇದರೊಂದಿಗೆ ಲಗತ್ತಿಕರಿಸಲಾಗಿದೆ. ಸಾಮಾಜಿಕ, ಆರ್ಥಿಕ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ತಜ್ಞರು, ಸಂಶೋಧಕರು ಈ ವಿಚಾರಸಂಕಿರಣದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here