ರಾಷ್ಟ್ರೀಯ ಸೇವಾ ಯೋಜನೋತ್ಸವ

0
226

 
ಉಜಿರೆ ಪ್ರತಿನಿಧಿ ವರದಿ
ಉಜಿರೆ ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಆತಿಥ್ಯದಲ್ಲಿ ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಏ.9 ರಿಂದ 13ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೋತ್ಸವದ ಉದ್ಘಾಟನಾ ಕಾರ್ಯಕ್ರಮ ಏ. 09ರಂದು ಸಂಜೆ 4 ಗಂಟೆಗೆ ನಡೆಯಲಿದೆ.
 
ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಮೀನುಗಾರಿಕಾ ಸಚಿವರಾದ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ. ಎಸ್. ಪ್ರಭಾಕರ್ ವಹಿಸಲಿದ್ದಾರೆ.
 
 
ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಕೆ. ಭೈರಪ್ಪ, ಅತಿಥಿಗಳಾಗಿ ರಾಷ್ಟ್ರೀಯ ಸೇವಾ ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶನಾಲಯದ ನಿರ್ದೇಶಕರಾದ ಎ.ಎನ್.ಪೂಜಾರ್, ರಾಷ್ಟ್ರೀಯ ಸೇವಾ ಯೋಜನೆಯ ಕೋಶದ ರಾಜ್ಯ ಸಂಪರ್ಕಾಧಿಕಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ವಿನೀತಾ ರೈ, ಹಾಗೂ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್.ಮೋಹನನಾರಾಯಣ ಭಾಗವಹಿಸಲಿದ್ದಾರೆ.
 
 
ಸಮಾರೋಪ ಸಮಾರಂಭ ಏ.13ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಶಾಸಕರಾದ ಕೆ. ವಸಂತ ಬಂಗೇರ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಟಿ. ಡಿ. ಕೆಂಪರಾಜು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಎಸ್. ಮೋಹನ ನಾರಾಯಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here