ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ವಿವರ

0
891

ಮ0ಗಳೂರು ಪ್ರತಿನಿಧಿ ವರದಿ
ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಉತ್ಕಷ್ಟ ಯೋಜನೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿ.ಪಿ.ಎ ಕಂಪನಿಗಳ ಮೂಲಕ ಉಚಿತ ಆರೋಗ್ಯ ವಿಮಾ ಸೌಲಭ್ಯ ಒದಗಿಸುವುದು ಇದರ ಉದ್ಧೇಶವಾಗಿದೆ. ಕಟ್ಟಡ ಕಾರ್ಮಿಕರು, ಬೀದಿ ಬದಿ ಮಾರಾಟಗಾರರು, ಬೀಡಿ ಕಾರ್ಮಿಕರು ಮತ್ತು ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಭರವಸೆ ಕಾರ್ಯಕ್ರಮದಲ್ಲಿ ನೋಂದಣಿಯಾದ ಕೆಲಸಗಾರರ ಕುಟುಂಬದ ಸದಸ್ಯರುಗಳು ಈ ಯೋಜನೆಯ ಸೌಲಭ್ಯಗಳನ್ನು ಪಡೆಯಬಹುದಾಗಿರುತ್ತದೆ.
 
 
ಕಳೆದ ಸಾಲಿನಲ್ಲಿ ನೋಂದಾವಣೆಯಾಗಿ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ಗಳನ್ನು ಬಳಸಿ ಫಲಾನುಭವಿ ಕುಟುಂಬದವರು ಒಂದು ವರ್ಷಕ್ಕೆ ರೂ. 30 ಸಾವಿರದವರೆಗಿನ ಚಿಕಿತ್ಸಾ ವೆಚ್ಚವನ್ನು ನಿಗದಿತ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಉಚಿತವಾಗಿ ನಗದು ನೀಡದೆ ಪಡೆಯಬಹುದಾಗಿದೆ. ಫಲಾನುಭವಿ ಕುಟುಂಬದ ಮುಖ್ಯಸ್ಥ ಹೆಂಡತಿ, ಗಂಡ, ಮಕ್ಕಳು ಹಾಗೂ ಅವಲಂಬಿತರು ಸೇರಿದಂತೆ ಒಟ್ಟು 5 ಮಂದಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
 
ಈ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಾವಣೆಯಾಗಿರುವ ಸರ್ಕಾರಿ/ಖಾಸಗಿ ಆಸ್ಪತ್ರೆಗಳು: ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಮಂಗಳೂರು, ಹರಿರಾಮ್ ಮೆಮೋರಿಯಲ್ ಮೆಡಿಕಲ್ ಸೆಂಟರ್, ಕಂಬಳ ಕ್ರಾಸ್ ರೋಡ್ ಮಂಗಳೂರು, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಜಸ್ಟಿಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್, ವಾಸನ್ ಐ ಕೇರ್ ಮಂಗಳೂರು,
 
ಚೇತನ ಆಸ್ಪತ್ರೆ ಪುತ್ತೂರು, ಪ್ರಗತಿ ಆಸ್ಪತ್ರೆ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಅಭಯ ಆಸ್ಪತ್ರೆ ಬೆಳ್ತಂಗಡಿ, ಬೆನಕ ಹೆಲ್ತ್ ಸೆಂಟರ್ ಉಜಿರೆ, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಬೆಳ್ತಂಗಡಿ, ಸೋಮಯಾಜಿ ಆಸ್ಪತ್ರೆ ಬಿ.ಸಿ.ರೋಡ್, ಜ್ಯೋತಿ ಆಸ್ಪತ್ರೆ ಸುಳ್ಯ ಹಾಗೂ ಜಿಲ್ಲೆಯ ಎಲ್ಲಾ ಸರಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಮುಲ್ಕಿ, ಮೂಡಬಿದ್ರೆ, ವಾಮದಪದವು, ವಿಟ್ಲ, ಉಪ್ಪಿನಂಗಡಿ, ಕಡಬ ಸಮುದಾಯ ಆರೋಗ್ಯ ಕೇಂದ್ರಗಳು.
ಫಲಾನುಭವಿಗಳು ಇದರ ಪ್ರಯೋಜನ ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
 

LEAVE A REPLY

Please enter your comment!
Please enter your name here