ರಾಷ್ಟ್ರ ರಾಜಧಾನಿಗೆ ದಾವೂದ್ ಕರಿಛಾಯೆ

0
424

 
ನವದೆಹಲಿ ಪ್ರತಿನಿಧಿ ವರದಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸಂಚು ನಡೆಸಿದೆ ಎಂದು ಗುಪ್ತಚಾರ ಇಲಾಖೆ ತಿಳಿಸಿದೆ.
 
 
1993 ರಲ್ಲಿ ಮುಂಬಯಿಯಲ್ಲಿ ನಡೆದ ಸರಣಿ ಸ್ಫೋಟದಂತೆ ದೆಹಲಿಯಲ್ಲೂ ನಡೆಸುವಂತೆ ದಾವೂದ್ ತನ್ನ ಸಹಚರರಿಗೆ ಆದೇಶ ನೀಡಿದ್ದಾನೆ ಎಂದು ಗುಪ್ತ ಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
 
 
ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಮಧ್ಯಪ್ರದೇಶದಲ್ಲಿ ಕೆಲ ಮಂದಿಗೆ ತರಬೇತಿ ನೀಡಲಾಗಿದ್ದು, ಅವರು ಈಗಾಗಲೇ ದೆಹಲಿ ತಲುಪಿದ್ದಾರೆ ಎನ್ನಲಾಗಿದೆ.  ದೆಹಲಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ, ವಿಧಾನಸಭೆ ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

LEAVE A REPLY

Please enter your comment!
Please enter your name here