ರಾಹುಲ್ ಗೆ ಸೆಪ್ಟೆಂಬರ್ ನಲ್ಲಿ ಅಧ್ಯಕ್ಷ ಪಟ್ಟ

0
466

 
ವರದಿ: ಲೇಖಾ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೆಪ್ಟೆಂಬರ್​ನಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.
 
 
ಇತ್ತೀಚೆಗೆ ನಡೆದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಾದ ಸೋಲಿನ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿಯವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಕೂಗು ಕೇಳಿಬಂದಿತ್ತು. ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ರಾಹುಲ್ ಅನೇಕ ಯೋಜನೆಗಳನ್ನು ಹೊಂದಿದ್ದಾರೆ. ಹೀಗಾಗಿ ಅವರಿಗೆ ಬಡ್ತಿ ನೀಡಬೇಕು ಎಂಬುದು ಕೆಲ ನಾಯಕರ ಆಗ್ರಹವಾಗಿದೆ.
 
 
ಹಿರಿಯ ನಾಯಕ ಜೈರಾಂ ರಮೇಶ್ ಸಹ ಇದಕ್ಕೆ ದನಿಗೂಡಿಸಿದ್ದರು. 2004ರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಿದ್ದ ರಾಹುಲ್ 2013ರ ಜನವರಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

LEAVE A REPLY

Please enter your comment!
Please enter your name here